Home ರಾಜಕೀಯ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನದ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ, ತನಿಖೆಗೆ ಆಗ್ರಹ

ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನದ ಕಾಮಗಾರಿಯಲ್ಲಿ ವ್ಯಾಪಕ ಭ್ರಷ್ಟಾಚಾರದ ಆರೋಪ, ತನಿಖೆಗೆ ಆಗ್ರಹ

by Laxmikanth Nayak
0 comments

ಯಾದಗಿರಿ: ನಗರದ ಪ್ರಾದೇಶಿಕ ಅರಣ್ಯ ಇಲಾಖೆ ವತಿಯಿಂದ ಆದರ್ಶ ವಿದ್ಯಾಲಯದ ಹಿಂಭಾಗದಲ್ಲಿ ನಿರ್ಮಿಸಲಾಗಿರುವ ‘ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ’ ಯೋಜನೆಯಲ್ಲಿ ಬೃಹತ್ ಮೊತ್ತದ ಅನುದಾನ ದುರುಪಯೋಗವಾಗಿದೆ ಎಂದು ಆರೋಪಿಸಿ ಸರ್. ಎಂ. ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘ (ರಿ), ತಾಲ್ಲೂಕಾ ಸಮಿತಿ ಶಹಾಪೂರ ವತಿಯಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿ, ಕೂಡಲೇ ತನಿಖೆ ಕೈಗೊಳ್ಳುವಂತೆ ಆಗ್ರಹಿಸಿದೆ.

ಸಂಘದ ಅಧ್ಯಕ್ಷ ಪ್ರದೀಪ ಅಣಬಿ ಅವರು ನೀಡಿದ ದೂರಿನಲ್ಲಿ, 2023-24ನೇ ಸಾಲಿನಲ್ಲಿ ಈ ವೃಕ್ಷೋದ್ಯಾನದ ಕಾಮಗಾರಿಗಳಿಗೆ ₹1 ಕೋಟಿಗೂ ಅಧಿಕ ಅನುದಾನ ಖರ್ಚು ಮಾಡಲಾಗಿದೆ ಎಂದು ದಾಖಲೆಗಳು ಹೇಳುತ್ತವೆ. ಆದರೆ, ಸ್ಥಳ ಪರಿಶೀಲನೆ ನಡೆಸಿದಾಗ ಕಾಮಗಾರಿಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿರುವುದು ಹಾಗೂ ಕೆಲವು ಕೆಲಸಗಳು ಅಪೂರ್ಣವಾಗಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ಯೋಜನೆಯಲ್ಲಿನ ಲೋಪದೋಷಗಳು:

  • ಕಳಪೆ ಕಾಮಗಾರಿ: ಉದ್ಯಾನದಲ್ಲಿ ಅಳವಡಿಸಲಾದ ನೀರಿನ ಟ್ಯಾಂಕ್ ಈಗಾಗಲೇ ಹಾಳಾಗಿದೆ. ಆಸನಗಳು ಮುರಿದು ಬಿದ್ದಿವೆ, ಟ್ರಾಕಿಂಗ್ ರಸ್ತೆಯ ಪಾರ್ಕಿಂಗ್ ಟೈಲ್ಸ್‌ಗಳು ಕಿತ್ತು ಹೋಗಿವೆ. ಇದು ಕಳಪೆ ಕಾಮಗಾರಿಗೆ ಸ್ಪಷ್ಟ ನಿದರ್ಶನವಾಗಿದೆ.
  • ಗಿಡಗಳ ನಿರ್ಲಕ್ಷ್ಯ: ಅರಣ್ಯ ಇಲಾಖೆ ಗಿಡಮರಗಳನ್ನು ನೆಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಗಿಡಗಳನ್ನು ಅಲೆದಾಡಿ ಬಿಸಾಕಿದ್ದಾರೆ.
  • ನಿಯಮಗಳ ಉಲ್ಲಂಘನೆ: ಕರ್ನಾಟಕ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ಉಲ್ಲಂಘನೆಯಾಗಿದ್ದು, ಕಾಮಗಾರಿಗಳ ವಿವರಗಳನ್ನು ಒಳಗೊಂಡ ನಾಮಫಲಕವನ್ನು ಅಳವಡಿಸಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರುದಾರರಾದ ಪ್ರದೀಪ ಅಣಬಿ ಅವರು ಕಾಮಗಾರಿಯಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಪಾದಚಾರಿ ಮಾರ್ಗ, ನೀರಿನ ಟ್ಯಾಂಕ್, ವಾಹನ ನಿಲುಗಡೆ, ಮಕ್ಕಳ ಆಟದ ಮೈದಾನ, ಗಜೆಬೋ ಮುಂತಾದ ಕಾಮಗಾರಿಗಳ ಬಗ್ಗೆ ತನಿಖಾ ತಂಡ ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

banner

ಈ ಕುರಿತು ಜಿಲ್ಲಾಧಿಕಾರಿಗಳು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಎಲ್ಲ ಉನ್ನತ ಅಧಿಕಾರಿಗಳಿಗೂ ದೂರಿನ ಪ್ರತಿಗಳನ್ನು ರವಾನಿಸಲಾಗಿದೆ ಎಂದು ಪ್ರದೀಪ ಅಣಬಿ ತಿಳಿಸಿದ್ದಾರೆ. ಈ ಭ್ರಷ್ಟಾಚಾರದ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಪತ್ರಿಕೆಯೊಂದು ಮನ ಸೆಳೆಯುವ ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನ ಎನ್ನುವ ತಲೆಬರಹದ ಅಡಿಯಲ್ಲಿ ಸುಳ್ಳು ಸುದ್ದಿ ಮಾಡಿರುವುದು ಇಲ್ಲಿ ಸ್ಮರಣೀಯ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ