Home ಅಂತರಾಷ್ಟ್ರೀಯ ಸುದ್ದಿ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸುಧಾರಣೆ; ಉತ್ತರ ಕರ್ನಾಟಕ ಪ್ರವಾಹದ ಬಗ್ಗೆ ಸರ್ಕಾರದ ನಿಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸುಧಾರಣೆ; ಉತ್ತರ ಕರ್ನಾಟಕ ಪ್ರವಾಹದ ಬಗ್ಗೆ ಸರ್ಕಾರದ ನಿಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ

by Laxmikanth Nayak
0 comments

ಬೆಂಗಳೂರು: ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಆರೋಗ್ಯ ಸುಧಾರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಿಳಿಸಿದ್ದಾರೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖರ್ಗೆಯವರನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಖರ್ಗೆಯವರ ಆರೋಗ್ಯವೀಗ ಉತ್ತಮವಾಗಿದೆ,” ಎಂದು ಮಾಹಿತಿ ನೀಡಿದರು.

​ಉತ್ತರ ಕರ್ನಾಟಕದ 9 ಜಿಲ್ಲೆಗಳಲ್ಲಿ ಶೇ.95ರಷ್ಟು ಪ್ರವಾಹ

​ರಾಜ್ಯದ ಪ್ರಸ್ತುತ ಪ್ರವಾಹ ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ, ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಸಂಭವಿಸಿದೆ ಎಂದು ತಿಳಿಸಿದರು. ಪ್ರವಾಹ ಪೀಡಿತ ಜಿಲ್ಲೆಗಳ ಪಟ್ಟಿಯನ್ನು ನೀಡಿದ ಅವರು, ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು, ಹುಬ್ಬಳ್ಳಿ-ಧಾರವಾಡ ಮತ್ತು ಗದಗ ಜಿಲ್ಲೆಗಳು ಪ್ರವಾಹಕ್ಕೆ ತುತ್ತಾಗಿವೆ ಎಂದು ಹೇಳಿದರು.

​ಕುಮಾರಸ್ವಾಮಿ ಹೇಳಿಕೆಗೆ ಸ್ವಾಗತ, ಆದರೆ ಹಳೆಯ ಕಹಿ ನೆನಪು

​ಪ್ರವಾಹ ಪರಿಹಾರದ ವಿಚಾರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದಿಂದ ಪ್ರವಾಹ ಪರಿಹಾರ ಕೊಡಿಸುವುದಾಗಿ ನೀಡಿರುವ ಹೇಳಿಕೆಯನ್ನು ಸ್ವಾಗತಿಸುತ್ತೇವೆ ಎಂದರು.

​ಆದರೆ, ಈ ಸಂದರ್ಭದಲ್ಲಿ ಅವರು 2023ರ ಬರಗಾಲದ ಸಂದರ್ಭವನ್ನು ನೆನಪಿಸಿ, “2023ರಲ್ಲಿ ರಾಜ್ಯಕ್ಕೆ ಬರಗಾಲ ಬಂದಿದ್ದಾಗ, ಕೇಂದ್ರ ಸರ್ಕಾರದವರು ಬರಪರಿಹಾರ ನೀಡದೇ ಸುಪ್ರೀಂಕೋರ್ಟ್ ಬಳಿ ಧಾವಿಸುವಂತಾಯಿತು, ಬಳಿಕ ಕಾನೂನಾತ್ಮಕ ಹೋರಾಟದಿಂದ ಪರಿಹಾರ ತೆಗೆದುಕೊಳ್ಳುವಂತಾಯಿತು,” ಎಂದು ಹೇಳಿದರು. ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ, ರಾಜ್ಯ ಸರ್ಕಾರವು ಕೂಡಲೇ ಪ್ರಸ್ತಾವನೆಯನ್ನು ಸಲ್ಲಿಸಲಿದೆ ಎಂದು ಸ್ಪಷ್ಟಪಡಿಸಿದರು.

banner

​ಜಾತಿಗಣತಿ ಕುರಿತು ಬಿಜೆಪಿಗೆ ಟೀಕೆ: “ಯಥಾಸ್ಥಿತಿ ವಾದಿಗಳು”

​ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ಇದನ್ನು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಎಂದು ಬಣ್ಣಿಸಿದರು. ಈ ಸಮೀಕ್ಷೆಯ ಉದ್ದೇಶ ಅಸಮಾನತೆಯನ್ನು ಹೋಗಲಾಡಿಸಿ, ದುರ್ಬಲರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಎಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯವನ್ನು ಉಲ್ಲೇಖಿಸಿದರು.

​ಈ ನಿಲುವನ್ನು ವಿರೋಧಿಸುವ ಬಿಜೆಪಿಯವರನ್ನು “ಬಿಜೆಪಿಯವರು ಯಥಾಸ್ಥಿತಿ ವಾದಿಗಳು” ಎಂದು ಟೀಕಿಸಿದ ಅವರು, “ಸಮಾಜದಲ್ಲಿ ಅಸಮಾನತೆ ನಿರಂತರವಾಗಿರಬೇಕು ಎಂಬುದು ಬಿಜೆಪಿಯವರ ಬಯಕೆ. ನಿರ್ದಿಷ್ಟವಾದ ಜಾತಿಯೊಂದು ಉತ್ತುಂಗದಲ್ಲಿರಬೇಕೆಂದು ಬಿಜೆಪಿ ಬಯಸುತ್ತದೆ,” ಎಂದು ಆರೋಪಿಸಿದರು. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ, ಕೇಂದ್ರ ಸರ್ಕಾರವೂ ಜಾತಿಗಣಿತಿ ನಡೆಸಲು ಮುಂದಾಗಿದೆ ಎಂದರು.

​ಈ ಎಲ್ಲಾ ಹೇಳಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ