Home ರಾಜಕೀಯ ಮಹಾತ್ಮಗಾಂದಿ ನರೇಗಾ ಯೋಜನೆಯಡಿಲ್ಲಿ ಜಾಬ್ ಕಾರ್ಡ್ಗೆ ತಪ್ಪದೇ ಇ-ಕೆವೈಸಿ ಮಾಡಿಸಿ. ಸಿಇಒ: ಶ್ರೀ ಲವೀಶ್ ಒರಡಿಯಾ

ಮಹಾತ್ಮಗಾಂದಿ ನರೇಗಾ ಯೋಜನೆಯಡಿಲ್ಲಿ ಜಾಬ್ ಕಾರ್ಡ್ಗೆ ತಪ್ಪದೇ ಇ-ಕೆವೈಸಿ ಮಾಡಿಸಿ. ಸಿಇಒ: ಶ್ರೀ ಲವೀಶ್ ಒರಡಿಯಾ

by Laxmikanth Nayak
0 comments

ಮಹಾತ್ಮಗಾಂಧಿ ನರೇಗಾ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಅಭಿಯಾನ
ಮಹಾತ್ಮಗಾಂದಿ ನರೇಗಾ ಯೋಜನೆಯಡಿಲ್ಲಿ ಜಾಬ್ ಕಾರ್ಡ್ಗೆ ತಪ್ಪದೇ ಇ-ಕೆವೈಸಿ ಮಾಡಿಸಿ.
ಸಿಇಒ: ಶ್ರೀ ಲವೀಶ್ ಒರಡಿಯಾ

ಯಾದಗಿರಿ: ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ಮಾನ್ಯತಾ ಅವಧಿಯನ್ನು ಇ-ಕೆವೈಸಿ ಮೂಲಕ ಪೂರ್ಣಗೊಳಿಸಲಾಗುತ್ತಿದ್ದು, ಎಲ್ಲ್ಲಾ ನರೇಗಾ ಕೂಲಿ ಕಾರ್ಮಿಕರು ಈ ಅಭಿಯಾನದಲ್ಲಿ ಭಾಗವಹಿಸಿ ಕಡ್ಡಾಯವಾಗಿ ತಮ್ಮ ಜಾಬ್ ಕಾರ್ಡ್ಗೆ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಲವೀಶ್ ಒರಡಿಯಾ ರವರು ಮನವಿ ಮಾಡಿದ್ದಾರೆ.

ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಆದೇಶ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೋಂದಾಯಿತ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್ ಅನ್ನು ಇ-ಕೆವೈಸಿ ಮೂಲಕ ಮೌಲ್ಯೀಕರಿಸುತ್ತಿದ್ದು, ನರೇಗಾ ಯೋಜನೆಯಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್ ಮಾನ್ಯತಾ ಅಭಿಯಾನದ ಮಾದರಿಯಲ್ಲಿ ಅತೀ ತುರ್ತಾಗಿ ಇ-ಕೆವೈಸಿ ಮೂಲಕ ಪೂರ್ಣಗೊಳಿಸಲು ಸಿಬ್ಬಂದಿಗಳಿಗೆ ಅಗತ್ಯ ತರಬೇತಿಯನ್ನು ನೀಡಲಾಗಿದೆ ಎಂದರು.

ತರಬೇತಿ ಪಡೆದ ಎಲ್ಲಾ ಸಿಬ್ಬಂದಿಗಳು ಜಾಬ್ ಕಾರ್ಡ್ಗಳಿಗೆ ಇ-ಕೆವೈಸಿ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ಇ-ಕೆವೈಸಿ ಪ್ರಕ್ರಿಯೆಯಲ್ಲಿ ಕೂಲಿಕಾರ್ಮಿಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಮುಂದಿನ ದಿನಗಳಲ್ಲಿ ಇ-ಕೆವೈಸಿ ಮಾಡಿಕೊಳ್ಳದ ಜಾಬ್-ಕಾರ್ಡ್ಗಳು ನಿಷ್ಕ್ರಿಯವಾಗುತ್ತವೆ ಎಂದು ತಿಳಿಸಿದ್ದಾರೆ.

banner

ಮಹಾತ್ಮಗಾಂಧಿ ನರೇಗಾ ಯೋಜನೆಯ ಹೆಚ್ಚು ಪಾರದರ್ಶಕ ಅನುಷ್ಟಾನಕ್ಕೆ ಮತ್ತೊಂದು ಹೆಜ್ಜೆ ಇ-ಕೆವೈಸಿ ಆಗಿದ್ದು, ನರೇಗಾ ಕೂಲಿಕಾರರು, ಕಾಯಕ ಬಂಧುಗಳು ತಮ್ಮ ಜಾಬ್ ಕಾರ್ಡ್ಗಳಿಗೆ ಇ-ಕೆವೈಸಿ ಅಷ್ಟೇಟ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನಮ್ಮ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಶಹಾಪುರ 51944, ಸುರಪುರ 56669, ಯಾದಗಿರಿ 40934, ಗುರುಮಿಟಕಲ್ 22022, ವಡಗೇರಾ 32215 ಹಾಗೂ ಹುಣಸಗಿ 48155 ಸೇರಿ ಒಟ್ಟು 2,51,939 ಜನ ಸಕ್ರಿಯ ಕೂಲಿಕಾರ್ಮಿಕರಿದ್ದು, ಎಲ್ಲರೂ ಸಹ ತಪ್ಪದೇ ತಮ್ಮ ಜಾಬ್ ಕಾರ್ಡ್ಗೆ ಇ-ಕೆವೈಸಿ ಅಪ್ಲೇಟ್ ಮಾಡಿಕೊಳ್ಳಲು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ಗ್ರಾಮ ಪಂಚಾಯಿತಿ ಪಿಡಿಓ, ಕಾರ್ಯದರ್ಶಿ, ಡಿಇಒ, ಬಿಎಫ್ಟಿ, ಜಿಕೆಎಂ ಸೇರಿದಂತೆ ನರೇಗಾ ಸಿಬ್ಬಂದಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ