Home ರಾಜಕೀಯ ರಾಜ್ಯೋತ್ಸವ ಪ್ರಶಸ್ತಿ ವಂಚನೆ ಆರೋಪ: 35 ವರ್ಷಗಳ ಹಿಂದೆ ಅರಣ್ಯ ಇಲಾಖೆಯಲ್ಲಿ ಕೂಲಿ ಮಾಡಿದ ವ್ಯಕ್ತಿಗೆ ಪರಿಸರ ಪ್ರೇಮಿ ಪಟ್ಟ!

ರಾಜ್ಯೋತ್ಸವ ಪ್ರಶಸ್ತಿ ವಂಚನೆ ಆರೋಪ: 35 ವರ್ಷಗಳ ಹಿಂದೆ ಅರಣ್ಯ ಇಲಾಖೆಯಲ್ಲಿ ಕೂಲಿ ಮಾಡಿದ ವ್ಯಕ್ತಿಗೆ ಪರಿಸರ ಪ್ರೇಮಿ ಪಟ್ಟ!

by Laxmikanth Nayak
0 comments

ರಾಜ್ಯೋತ್ಸವ ಪ್ರಶಸ್ತಿ ವಂಚನೆ ಆರೋಪ: ಯಾದಗಿರಿ ಪರಿಸರ ಪ್ರೇಮಿಯ ಬಗ್ಗೆ ಗಂಭೀರ ತನಿಖೆಗೆ ಆಗ್ರಹ

ಯಾದಗಿರಿ: ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ ಪರಿಸರ ವಿಭಾಗದಲ್ಲಿ ನೀಡಿದ ರಾಜ್ಯೋತ್ಸವ ಪ್ರಶಸ್ತಿಯ ಸುತ್ತ ಯಾದಗಿರಿ ಜಿಲ್ಲೆಯಲ್ಲಿ ಗಂಭೀರ ವಿವಾದವೊಂದು ಭುಗಿಲೆದ್ದಿದೆ. ರಾಮಸಮುದ್ರ ಗ್ರಾಮದ ಮಲ್ಲಿಕಾರ್ಜುನ ರಾಮಸಮುದ್ರ ಅವರಿಗೆ ಪ್ರಶಸ್ತಿ ದೊರಕಿದ್ದು, ಅವರು ಐದು ಲಕ್ಷಕ್ಕೂ ಹೆಚ್ಚು ಮರಗಳನ್ನು ನೆಟ್ಟಿದ್ದಾರೆಂಬ ಹೇಳಿಕೆಯು ಸತ್ಯಕ್ಕೆ ದೂರವಾದುದು ಎಂದು ಸ್ಥಳೀಯರು ಹಾಗೂ ಅರಣ್ಯ ಇಲಾಖೆಯ ಮೂಲಗಳು ಆರೋಪಿಸಿವೆ. ಈ ಕುರಿತು ಪತ್ರಕರ್ತರು ನಡೆಸಿದ ತನಿಖೆಯಲ್ಲಿ, ಐಎಎಸ್‌ ತರಬೇತಿ ನಿರತ ವ್ಯಕ್ತಿ ಎಂದು ಹೇಳಿಕೊಂಡಿರುವ ಮಲ್ಲಿಕಾರ್ಜುನರ ಮಗ ಬೀರೇಶ್ ಅವರು, ವ್ಯವಸ್ಥಿತವಾಗಿ ಸುಳ್ಳು ಮಾಹಿತಿ ನೀಡಿ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರವನ್ನು ವಂಚಿಸಿದ್ದಾರೆ ಎಂಬ ಗಂಭೀರ ಸಂಗತಿ ಬೆಳಕಿಗೆ ಬಂದಿದೆ.

ಮಲ್ಲಿಕಾರ್ಜುನ ರಾಮಸಮುದ್ರ ಅವರು 1985ರಲ್ಲಿ ಅರಣ್ಯ ಇಲಾಖೆಯಲ್ಲಿ ಕೂಲಿ ಕೆಲಸ ಮಾಡಿದ್ದು ನಿಜ. ಆದರೆ, ಕಡುಬಡತನದಲ್ಲಿದ್ದ ಅವರು ಐದು ಲಕ್ಷ ಮರಗಳನ್ನು ನೆಟ್ಟಿದ್ದಾರೆ ಅಥವಾ ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ನರ್ಸರಿ ಮಾಡಿದ್ದಾರೆ ಎಂಬ ವಾದವು ಸಂಪೂರ್ಣ ಸುಳ್ಳು ಎಂದು ಸ್ಥಳೀಯರು ಸ್ಪಷ್ಟಪಡಿಸಿದ್ದಾರೆ. ವಾಸ್ತವವಾಗಿ, ಅವರು ಬೆಂಗಳೂರು ಕಡೆಗೆ ವಲಸೆ ಹೋಗಿ ಕಾಂಕ್ರೀಟ್‌ ಕೆಲಸ ಮಾಡುತ್ತಿದ್ದರು ಮತ್ತು ಸ್ವಇಚ್ಛೆಯಿಂದ ಪರಿಸರ ಜವಾಬ್ದಾರಿ ನಿರ್ವಹಿಸಿದ ಯಾವುದೇ ದಾಖಲೆಗಳಿಲ್ಲ ಎಂದು ನೆರೆಹೊರೆಯವರು ತಿಳಿಸಿದ್ದಾರೆ.

ಈ ಸುಳ್ಳು ಮಾಹಿತಿಯ ಆಧಾರದ ಮೇಲೆ, ಮಲ್ಲಿಕಾರ್ಜುನ ಅವರನ್ನು ಜಿಲ್ಲಾಡಳಿತವು ಕನಕ ಜಯಂತಿ ಕಾರ್ಯಕ್ರಮದಲ್ಲಿ ಸನ್ಮಾನಿಸುವಂತೆ ನೋಡಿಕೊಳ್ಳಲಾಗಿದೆ. ಈ ಸನ್ಮಾನ ಮತ್ತು ಆಧಾರರಹಿತವಾದ ಕೆಲವು ಸ್ಥಳೀಯ ಪತ್ರಿಕಾ ವರದಿಗಳನ್ನು ಮುಂದಿಟ್ಟುಕೊಂಡು, ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯನ್ನು ದಾರಿ ತಪ್ಪಿಸಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಮಲ್ಲಿಕಾರ್ಜುನ ಅವರು ಪರಿಸರ ಪ್ರೇಮಿ ಎಂಬುದಕ್ಕೆ ಇಲಾಖೆಯಲ್ಲಿ ಯಾವುದೇ ದಾಖಲೆಗಳಿಲ್ಲ. ಅಲ್ಲದೆ, ಪ್ರಶಸ್ತಿಗಾಗಿ ಶಿಫಾರಸ್ಸು ಪತ್ರ ಕೇಳಿಕೊಂಡು ಬಂದ ಯುವಕನಿಗೆ ದಾಖಲೆಗಳ ಕೊರತೆಯಿಂದಾಗಿ ಶಿಫಾರಸ್ಸು ಮಾಡಲು ನಿರಾಕರಿಸಲಾಗಿತ್ತು ಎಂದೂ ಅಧಿಕಾರಿಗಳು ಹೇಳಿದ್ದಾರೆ.

banner

ಭಾರತೀಯ ಆಡಳಿತ ತರಬೇತಿಗೆ ಸಿದ್ಧವಾಗುತ್ತಿರುವ ವ್ಯಕ್ತಿಯೊಬ್ಬರು ಸುಳ್ಳು ಕಥೆಗಳನ್ನು ಸೃಷ್ಟಿಸಿ ರಾಜ್ಯ ಸರ್ಕಾರವನ್ನೇ ವಂಚಿಸಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. “ಸರ್ಕಾರವೇ ಸುಳ್ಳುಗಾರರ ಕಥೆಗಳಿಗೆ ಬಲಿಯಾದರೆ ಸಾಮಾನ್ಯ ನಾಗರಿಕರ ಗತಿ ಏನು?” ಎಂಬ ಪ್ರಶ್ನೆಗಳು ಎದ್ದಿವೆ. ಸಾರ್ವಜನಿಕರ ಆಗ್ರಹದ ಮೇರೆಗೆ, ರಾಜ್ಯ ಸರ್ಕಾರವು ಈ ಗಂಭೀರ ಪ್ರಕರಣವನ್ನು ಕೂಡಲೇ ಪರಿಗಣಿಸಿ, ಪ್ರಶಸ್ತಿಯ ಸತ್ಯಾಸತ್ಯತೆ ಕುರಿತು ಸೂಕ್ತ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ