Home ರಾಜಕೀಯ ವಿಧಾನಮಂಡಲ ಅಧಿವೇಶನದಲ್ಲಿ ಅಥಣಿ ಸೇರಿದಂತೆ ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹ

ವಿಧಾನಮಂಡಲ ಅಧಿವೇಶನದಲ್ಲಿ ಅಥಣಿ ಸೇರಿದಂತೆ ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹ

by Laxmikanth Nayak
0 comments
ವಿಧಾನಮಂಡಲ ಅಧಿವೇಶನದಲ್ಲಿ ಅಥಣಿ ಸೇರಿದಂತೆ ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹ

ಪ್ರತಿ ವರ್ಷದ ನಿರ್ಲಕ್ಷ್ಯ ಖಂಡಿಸಿ ಗಂಭೀರ ಚರ್ಚೆಗೆ ಆಗ್ರಹ

ಬೆಳಗಾವಿ/ಅಥಣಿ:

ಬೆಳಗಾವಿ ಜಿಲ್ಲೆಯಲ್ಲಿ ಡಿಸೆಂಬರ್ 8 ರಿಂದ 19 ರವರೆಗೆ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಸಮಸ್ಯೆಗಳ ಬಗ್ಗೆ ಕಡ್ಡಾಯವಾಗಿ ಚರ್ಚೆ ನಡೆಸಬೇಕು ಎಂದು ಆಲ್ ಇಂಡಿಯಾ ಮೀಡಿಯಾ ಅಸೋಸಿಯೇಷನ್ ಸದಸ್ಯ ಮಹೇಶ್ ಶರ್ಮಾ (ಬುದ್ಧ ಬಸವ ಅಂಬೇಡ್ಕರ್) ಅವರು ಸರ್ಕಾರಕ್ಕೆ ಬಲವಾದ ಮನವಿ ಮಾಡಿದ್ದಾರೆ. ಪ್ರತಿ ವರ್ಷ ಅಧಿವೇಶನ ನಡೆದರೂ, ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಥಣಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯ

ವಿಶೇಷವಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕು ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದಿದ್ದು, ಈ ಅಧಿವೇಶನದಲ್ಲಿ ಅಥಣಿಯ ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಕನಸುಗಳನ್ನು ನನಸು ಮಾಡಲು ಮುಖ್ಯಮಂತ್ರಿಗಳು ಹಾಗೂ ಶಾಸಕರು ಗಮನಹರಿಸಬೇಕು ಎಂದು ಶ್ರೀ ಶರ್ಮಾ ಆಗ್ರಹಿಸಿದರು.

ಅಥಣಿ ತಾಲ್ಲೂಕಿಗೆ ಸಂಬಂಧಿಸಿದಂತೆ ಚರ್ಚೆಯಾಗಬೇಕಿರುವ ಪ್ರಮುಖ ಬೇಡಿಕೆಗಳು ಹೀಗಿವೆ:

banner
  • ಆಡಳಿತಾತ್ಮಕ ಬದಲಾವಣೆಗಳು: ಅಥಣಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವುದು ಮತ್ತು ಶಿವಯೋಗಿ ನಗರವನ್ನು ಪುರಸಭೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವುದು.
  • ಮೂಲಭೂತ ಸೌಕರ್ಯ ಮತ್ತು ರಸ್ತೆಗಳು: ತಾಲ್ಲೂಕಿನ ಪ್ರಮುಖ ರಸ್ತೆಗಳ ಸುಧಾರಣೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯನ್ನು ನಿವಾರಿಸುವುದು.
  • ಸಂಚಾರ ಮತ್ತು ಸಾರಿಗೆ: ಅಥಣಿ ಪಟ್ಟಣದ ಟ್ರಾಫಿಕ್ ಸಮಸ್ಯೆ ನಿವಾರಣೆ, ರೈಲ್ವೆ ಸೌಲಭ್ಯಗಳ ಅಭಿವೃದ್ಧಿ ಹಾಗೂ ವಿಮಾನ ನಿಲ್ದಾಣದ ಬೇಡಿಕೆಯ ಕುರಿತು ಚರ್ಚೆ.
  • ಶಿಕ್ಷಣ ಮತ್ತು ನೀರಾವರಿ: ಶಿವಯೋಗಿ ನಗರದಲ್ಲಿ 9ನೇ ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸುವುದು ಹಾಗೂ ಕೆರೆ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವುದು.
  • ಇತರೆ: ತಾಲ್ಲೂಕಿನಲ್ಲಿ ಜಿಲ್ಲಾ ಕಾರ್ಯಾಲಯದ ಕಚೇರಿಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳುವುದು.

ಚುನಾವಣಾ ಭರವಸೆಗಳ ಬಗ್ಗೆ ಆಕ್ಷೇಪ

ಚುನಾವಣೆ ಬಂದಾಗ ಮಾತ್ರ ಅಭಿವೃದ್ಧಿ ಮಾಡುವ ಭರವಸೆ ನೀಡಿ, ಚುನಾವಣೆ ಮುಗಿದ ನಂತರ ಆಶ್ವಾಸನೆಗಳನ್ನು ಮರೆತು ಮರುಚಿಕೆ ಮಾಡುತ್ತಿರುವ ಸಂಬಂಧಪಟ್ಟ ಜನಪ್ರತಿನಿಧಿಗಳ ಧೋರಣೆಗೆ ಮಹೇಶ್ ಶರ್ಮಾ ಅವರು ಆಕ್ಷೇಪ ವ್ಯಕ್ತಪಡಿಸಿದರು.

“ಇನ್ನಾದರೂ ತಾಲೂಕು ಆಡಳಿತ, ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮುಖ್ಯಮಂತ್ರಿಗಳು ಚಳಿಗಾಲದ ಅಧಿವೇಶನದಲ್ಲಿ ಈ ವಿಷಯಗಳನ್ನು ಗಂಭೀರವಾಗಿ ಚರ್ಚಿಸಿ, ಉತ್ತರ ಕರ್ನಾಟಕ ಮತ್ತು ಅಥಣಿಯ ಅಭಿವೃದ್ಧಿಗೆ ಯೋಜನೆಗಳನ್ನು ಜಾರಿಗೆ ತಂದು ಮುಂದಾಗುತ್ತಾರೆಯೇ ಅಥವಾ ಯಥಾಸ್ಥಿತಿ ಮುಂದುವರೆಯುತ್ತದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ, ಅಭಿವೃದ್ಧಿಗೆ ಸೂಕ್ತ ಯೋಜನೆಗಳು ಜಾರಿಗೆ ಬರಬೇಕು ಎಂದು ಅವರು ಕಳಕಳಿಯ ಮನವಿಯನ್ನು ಮಾಡಿಕೊಂಡಿದ್ದಾರೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ