12
ಹುಬ್ಬಳ್ಳಿ: ನ. 27 – ನಗರದ ಮೂರು ಸಾವಿರ ಮಠದ ಬಳಿ ನಡೆದ ದುರದೃಷ್ಟಕರ ಘಟನೆಯೊಂದರಲ್ಲಿ ವಿದ್ಯುತ್ ಶಾಕ್ ತಗುಲಿ ಯುವತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಮೃತ ಯುವತಿಯನ್ನು ಮೇಘನಾ (24) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಮೋಟಾರ್ (ಪಂಪ್) ಆನ್ ಮಾಡಲಾಗಿತ್ತು. ಅದನ್ನು ಆಫ್ ಮಾಡಲು ಹೋಗಿದ್ದ ವೇಳೆ ಮೇಘನಾ ಅವರಿಗೆ ಆಕಸ್ಮಿಕವಾಗಿ ತೀವ್ರವಾದ ವಿದ್ಯುತ್ ಶಾಕ್ ತಗುಲಿತು.
ಘಟನೆಯ ನಂತರ ತೀವ್ರ ಅಸ್ವಸ್ಥಗೊಂಡಿದ್ದ ಮೇಘನಾ ಅವರನ್ನು ಕೂಡಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಯುವತಿ ಮೇಘನಾ ಅವರ ಅಕಾಲಿಕ ಸಾವಿನಿಂದ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ. ಈ ಕುರಿತು ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

