Home ರಾಜಕೀಯ ಅಸ್ಸಾಂ ಮಾದರಿಯಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ‘ಬಹುಪತ್ನಿತ್ವ’ ನಿಷೇಧ ಮಸೂದೆ ಅಂಗೀಕರಿಸಿ ! – ಹಿಂದೂ ಜನಜಾಗೃತಿ ಸಮಿತಿಯ ಆಗ್ರಹ

ಅಸ್ಸಾಂ ಮಾದರಿಯಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ‘ಬಹುಪತ್ನಿತ್ವ’ ನಿಷೇಧ ಮಸೂದೆ ಅಂಗೀಕರಿಸಿ ! – ಹಿಂದೂ ಜನಜಾಗೃತಿ ಸಮಿತಿಯ ಆಗ್ರಹ

by Laxmikanth Nayak
0 comments
ಅಸ್ಸಾಂ ಮಾದರಿಯಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತ 'ಬಹುಪತ್ನಿತ್ವ' ನಿಷೇಧ ಮಸೂದೆ ಅಂಗೀಕರಿಸಿ ! - ಹಿಂದೂ ಜನಜಾಗೃತಿ ಸಮಿತಿಯ ಆಗ್ರಹ


ಬೆಂಗಳೂರು : ಅಸ್ಸಾಂ ರಾಜ್ಯವು ‘ಅಸ್ಸಾಂ ಬಹುಪತ್ನಿತ್ವ ನಿಷೇಧ ಮಸೂದೆ 2025’ ಅನ್ನು ಅಂಗೀಕರಿಸುವ ಮೂಲಕ ಮಹಿಳೆಯರ ಹಕ್ಕುಗಳು ಮತ್ತು ಸುರಕ್ಷತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಐತಿಹಾಸಿಕ ಹೆಜ್ಜೆಯನ್ನು ಇಟ್ಟಿದೆ. ಮೊದಲ ವಿವಾಹದ ಮಾಹಿತಿಯನ್ನು ಮುಚ್ಚಿಟ್ಟು ಎರಡನೇ ಮದುವೆಯಾಗುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ, ಹಾಗೆಯೇ ಇದರಲ್ಲಿ ಭಾಗಿಯಾಗುವ ಗ್ರಾಮದ ಮುಖ್ಯಸ್ಥರು, ಖಾಜಿ, ಪೂಜಾರಿ ಹಾಗೂ ಪೋಷಕರಿಗೆ 2 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ರಿಂದ 1.5 ಲಕ್ಷ ರೂಪಾಯಿಗಳ ದಂಡದಂತಹ ಕಠಿಣ ಕ್ರಮಗಳಿಂದ ಮಹಿಳೆಯರ ಮೇಲಾಗುವ ಮಾನಸಿಕ, ಸಾಮಾಜಿಕ ಮತ್ತು ಆರ್ಥಿಕ ಶೋಷಣೆಗೆ ಕಡಿವಾಣ ಬೀಳಲಿದ

ದೋಷಿಗಳಿಗೆ ಸರ್ಕಾರಿ ಉದ್ಯೋಗಗಳು, ಯೋಜನೆಗಳ ಲಾಭ ಮತ್ತು ಚುನಾವಣೆಗಳಿಂದ ವಂಚಿತರನ್ನಾಗಿಸುವ ಕಲಂಗಳಿಂದ ಸಾಮಾಜಿಕ ಜವಾಬ್ದಾರಿ ಹೆಚ್ಚಾಗಲಿದೆ, ಹಾಗೂ ಸಂತ್ರಸ್ತ ಮಹಿಳೆಯರಿಗೆ ಪರಿಹಾರ, ಕಾನೂನು ಮತ್ತು ಆರ್ಥಿಕ ನೆರವು ಸಿಗಲಿದೆ. ಈ ಐತಿಹಾಸಿಕ ಕಾನೂನನ್ನು ಜಾರಿಗೆ ತಂದಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಡಾ. ಹಿಮಂತ ಬಿಸ್ವಾ ಶರ್ಮಾ ಅವರನ್ನು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಅಭಿನಂದಿಸುತ್ತೇವೆ ಮತ್ತು ಈ ಕಾನೂನನ್ನು ಕರ್ನಾಟಕ ಸೇರಿದಂತೆ ದೇಶಾದ್ಯಂತ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ ಶ್ರೀ. ಮೋಹನ್ ಗೌಡ ಅವರು ಹೇಳಿದ್ದಾರೆ.

ಟರ್ಕಿ, ಫ್ರಾನ್ಸ್, ಅಮೆರಿಕ, ಜರ್ಮನಿ, ಸ್ವೀಡನ್, ಇಂಗ್ಲೆಂಡ್, ಆಸ್ಟ್ರೇಲಿಯಾ, ಕೆನಡಾ, ಜಪಾನ್, ಸ್ಪೇನ್, ಇಟಲಿಯಿಂದ ಹಿಡಿದು ಜಾಗತಿಕ ಮಟ್ಟದಲ್ಲಿ ಸುಮಾರು 130 ರಿಂದ 140 ದೇಶಗಳಲ್ಲಿ ಬಹುಪತ್ನಿತ್ವ (ಪಾಲಿಗೆಮಿ) ವಿವಾಹದ ಮೇಲೆ ಕಠಿಣ ಕಾನೂನು ಅಥವಾ ಸಂಪೂರ್ಣ ನಿಷೇಧವಿದೆ. ಭಾರತದಲ್ಲಿ ಈ ಕಾನೂನು ಇದ್ದರೂ, ಎಲ್ಲಾ ಧರ್ಮಗಳಿಗೆ ಅನ್ವಯಿಸುವುದಿಲ್ಲ. ಆದರೂ ಬಹುಪತ್ನಿತ್ವವು ಮಹಿಳೆಯರ ಸ್ವಾತಂತ್ರ್ಯ ಮತ್ತು ಕುಟುಂಬ ವ್ಯವಸ್ಥೆಗೆ ಅಪಾಯವನ್ನುಂಟುಮಾಡುತ್ತದೆ. ಆದ್ದರಿಂದ ಇದು ಕೇವಲ ಅಸ್ಸಾಂಗೆ ಸೀಮಿತವಾಗದೆ ಕರ್ನಾಟಕ ಸೇರಿದಂತೆ ಸಂಪೂರ್ಣ ದೇಶಾದ್ಯಂತ ಈ ಕಾನೂನಿನ ಅವಶ್ಯಕತೆಯಿದೆ. ಅಸ್ಸಾಂನಂತಹ ಕಠಿಣ ಕಾನೂನು ದೇಶವ್ಯಾಪಿ ಜಾರಿಯಾದರೆ ಸ್ತ್ರೀ ಸುರಕ್ಷತೆ ಬಲಗೊಳ್ಳುತ್ತದೆ, ಎಂದು ಶ್ರೀ. ಮೋಹನ್ ಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ? ಇನ್ಮುಂದೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುವ ಪೋಲಿಸ್‌ ಸೇವೆಯಿಂದ ವಜಾ: ಪರಮೇಶ್ವರ್ ಮಾತಾಪಿತೃ ಸಂಹಾರ, ಕೊಂದು ತುಂಡು ತುಂಡು ಕತ್ತರಿಸಿದ ಮಗ! ಪ್ರೀತಿಯ ಕಾರಣಕ್ಕೆ ಭದ್ರಾವತಿಯಲ್ಲಿ ಜೋಡಿ ಕೊಲೆ! ಅಥಣಿಜಿಲ್ಲಾರಚನೆಗೆಹೆಚ್ಚಿದಒತ್ತಡ: ಸಿಎಂಭೇಟಿಯಾದಲಕ್ಷ್ಮಣಸವದಿನೇತೃತ್ವದನಿಯೋಗ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡದೆ ವಿವಿಧ ಸೌಲಭ್ಯಗಳನ್ನು ಕಡ್ಡಾಯವಾಗಿ ಜಾರಿಗೆ ಒತ್ತಾಯಿಸಿ ಮನವಿ