Home ಜಿಲ್ಲಾ ಸುದ್ದಿಗಳು ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ

ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ

by Laxmikanth Nayak
0 comments
ಸಂಯಮಕ್ಕೆ ಶರಣಪ್ಪ ಸಲಾದಪೂರ ಕರೆ

ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ

ಸಂಯಮಕ್ಕೆ ಶರಣಪ್ಪ ಸಲಾದಪೂರ ಕರೆ

ಯಾದಗಿರಿ: ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಯಾದಗಿರಿ ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಅಣಿಬಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಾಗೃತಿ ಜಾಥಾ ಹಾಗೂ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾದ ಶರಣಪ್ಪ ಸಲಾದಪೂರ, ಅಕ್ರಮ ಮದ್ಯವು ಕುಟುಂಬ ವ್ಯವಸ್ಥೆ, ಆರೋಗ್ಯ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಿದರು. ಈ ಅನಿಷ್ಟವನ್ನು ನಿರ್ಮೂಲನೆ ಮಾಡಲು ಗ್ರಾಮಮಟ್ಟದಲ್ಲಿಯೇ ಜನಜಾಗೃತಿ ಅತ್ಯಂತ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಯುವಕರು ಮತ್ತು ಮಹಿಳೆಯರು ಅಕ್ರಮ ಮದ್ಯದ ವಿರುದ್ಧ ನಡೆಯುವ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಲ್ಲಬೇಕು. ಸಂಯಮ ಮತ್ತು ಶಿಸ್ತಿನ ಮೂಲಕ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯವೆಂದು ಶರಣಪ್ಪ ಸಲಾದಪೂರ ಕರೆ ನೀಡಿದರು.

banner

ಈ ಸಂದರ್ಭದಲ್ಲಿ ಇಒ ಬಸವರಾಜ ಶರಬೈ, ರಾಜು ಅಣಿಬಿ, ಬಾಪುಗೌಡ ಅಣಿಬಿ, ಪಿಡಿಒ ರಮೇಶ್ ನಾಯಕ, ಆರೋಗ್ಯ ಇಲಾಖೆಯ ವೈದ್ಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಸಿಬ್ಬಂದಿ, ಮಹಿಳೆಯರು, ಗ್ರಾಮದ ಪ್ರಮುಖರು ಹಾಗೂ ಗ್ರಾಮಸ್ಥರು ಭಾಗವಹಿಸಿ ಅಕ್ರಮ ಮದ್ಯದ ವಿರುದ್ಧ ಜಾಗೃತಿ ಮೂಡಿಸಿದರು.

ಅಣಿಬಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಯಮಿತ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

You may also like

Leave a Comment

ಟ್ಯಾಗ್ ಲೈನ್: ದಮನಿತರ ಧ್ವನಿ ಮತ್ತು ಆಡಳಿತ ಸುಧಾರಣೆ ನಮ್ಮ ಧ್ಯೇಯ

Edtior's Picks

Latest Articles

Latest news
ಅಕ್ರಮ ಮದ್ಯದ ವಿರುದ್ಧ ಅಣಿಬಿಯಲ್ಲಿ ಜಾಗೃತಿ ಜಾಥಾ ರಾಯಚೂರು ಕೃಷಿ ವಿವಿ: ದಲಿತರ ಮೀಸಲಾತಿ ಸಹಿಸದವರಿಂದ ನೇಮಕಾತಿ ತಡೆಗೆ ಸಂಚು; ಜ.17ರ ಪರೀಕ್ಷೆಗೂ ಅಡ್ಡಿ ಸಾಧ್ಯತೆ? - ದಲಿ... ಗ್ರಾಮದ ಸ್ವಚ್ಛತೆಯಲ್ಲಿ ತ್ಯಾಜ್ಯ ನಿರ್ವಹಣೆ ಮುಖ್ಯ : ಸಿಇಒ ಲವೀಶ್ಒರಡಿಯಾ ದೇವತ್ಕಲ್–ಬಾಚಿಮಟ್ಟಿ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಕೊಪ್ಪಳ ಮೂಲಕ ಬೆಂಗಳೂರಿಗೆ ಆರು ರೈಲುಗಳನ್ನು ಓಡಿಸಲು ಮತ್ತು ಸಿಂಧನೂರು ದಿಂದ ಬೆಂಗಳೂರಿಗೆ ಹತ್ತು ತಾಸಿನಲ್ಲಿ ತಲುಪುವುದ... ಗುರುಗುಂಟಾ-ಹಟ್ಟಿ ರಸ್ತೆ ಸಂಪೂರ್ಣ ಬಲಿ: ಮೃತ್ಯುಕೂಪವಾದ ಹಾದಿಯಲ್ಲಿ ಪ್ರಯಾಣಿಕರ ಹೈರಾಣು ‎ಸುರಪುರ: ಅಗ್ನಿವೀರನಾಗಿ ಆಯ್ಕೆಯಾದ ಶ್ರೀನಿವಾಸ ನಾಯಕ ಅವರಿಗೆ ಗೌರವ ಸನ್ಮಾನ ಸಮಾಜದ ದಕ್ಷ ಅಧಿಕಾರಿಗಳನ್ನು ಶಾಸಕರು ಟಾರ್ಗೆಟ್ ಮಾಡಿದ್ರೆ ಕಚೇರಿಗೆ ಮುತ್ತಿಗೆ ಹಾಕ್ತೀವಿ: ಮಲ್ಲಿಕಾರ್ಜುನ ಗೋಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಾವಳಿಗಳಿಗೆ ಮಾರ್ಗಸೂಚಿ ಸಿದ್ದ: ಸರ್ಕಾರದ ಕಟ್ಟೆಚ್ಚರ ಕೆರೆ ನುಂಗಾಯಣದ ಕುರಿತು ಸದನದಲ್ಲಿ ವಾಗ್ವಾದ, ನುಂಗಿದರಾ ಕೆರೆ?